ಅಪಘಾತ

Please follow and like us:
Whatsapp

ಕಲಬುರಗಿ ಜಿಲ್ಲೆಯಲ್ಲಿ ಇಂದು ಪ್ರತ್ಯೇಕ ಮೂರು ಕಡೆ ಅಪಘಾತಗಳು ಸಂಭವಿಸಿವೆ. ಕಲಬುರಗಿಯ ಚಿಂಚೋಳಿ ತಾಲೂಕಿನ ಕೊಲ್ಲೂರು ಗ್ರಾಮದ ಬಳಿ ಲಾರಿ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಅಂಗಡಿಗಳ ಮೇಲೆ ಬಿದ್ದಿದ್ದು,ಲಾರಿ ಬಿದ್ದ ರಭಸಕ್ಕೆ ರಸ್ತೆ ಪಕ್ಕದಲ್ಲಿದ್ದ ಅಂಗಡಿಗಳು ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ.ಮಿರಿಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇನ್ನೂ ಕಲಬುರಗಿ ತಾಲೂಕಿನ ಪರತಾಬಾದ್ ಬಳಿ ವಿಆರ್ ಎಲ್ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಘಟನೆ ಬೀದರ್ ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ೨೧೮ ರಲ್ಲಿ ನಡೆದಿದೆ. ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಯಗಳಾಗಿದ್ದು,ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿ ಇದ್ದ ಹಲವರಿಗೆ ಗಾಯಗಾಳಾಗಿದ್ದು,ಅವರನ್ನು ಕೂಡ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.ಘಟನಾ ಸ್ಥಳ ಕ್ಕೆ ಪೊಲೀಸರು ಬೇಟಿ ನೀಡಿ ಪರಿಸಿಲನೆ ಮಾಡುತ್ತಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೂ ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಆರೇಂಜ್ ಬಸ್ ಒಂದು ತಡೆ ಗೊಡೆಗೆ ಡಿಕ್ಕಿ ಹೊಡೆದಿದ್ದು ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ

Please follow and like us:
Whatsapp

Leave a Reply

Your email address will not be published. Required fields are marked *

Whatsapp